ಕೇಸರಿ ಶಾಲು ಹಾಕುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ➤ ಚೂರಿ ಇರಿತ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 08. ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ಒರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾದವನನ್ನು ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್ ಎಂದು ಗುರುತಿಸಲಾಗಿದೆ. ಈತನನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಅಂತಿಮ ವರ್ಷದ ವಿದ್ಯಾರ್ಥಿಗಳು ಬಲಾತ್ಕಾರ ಮಾಡಿದ್ದು, ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

Also Read  ರಸ್ತೆಯಲ್ಲಿ ನಡೆಯುತ್ತಿದ್ದವರ ಮೇಲೆ ಹೆಜ್ಜೇನು ದಾಳಿ..! ➤ 8 ಮಂದಿ ಆಸ್ಪತ್ರೆಗೆ ದಾಖಲು

error: Content is protected !!
Scroll to Top