(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೈಕೋರ್ಟ್ ಆದೇಶದಂತೆ ಫೆ. 16ರಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುತ್ತದೆ ಎಂದು ಸಿಎಂ ಜೊತೆ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ನಾಗೇಶ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆ ಸೋಮವಾರದಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಿಯುಸಿ ಹಾಗೂ ಡಿಗ್ರಿ ಕಾಲೇಜು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ದಿನಗಳ ರಜೆಯ ಬಳಿಕ ಸೋಮವಾರದಿಂದ ಹೈಸ್ಕೂಲ್ ಪುನರಾರಂಭಗೊಳಿಸಲಾಗಿತ್ತು. ಇದೀಗ ಸಬೆಯ ಬಳಿಕ ಕಾಲೇಜು ಆರಂಭಕ್ಕೆ ಸರಕಾರ ಮುಂದಾಗಿದೆ. ಹಿಜಾಬ್ ವಿವಾದ ಸಂಬಂಧಿಸಿದಂತೆ ಕರ್ನಾಟಕದ ಜಿಲ್ಲಾಡಳಿತಗಳು ಸೂಕ್ತ ಕ್ರಮಗಳನ್ನು ಕೈಗೊಂಡಿವೆ. ಈ ಕುರಿತು ಸಿಎಂ ಬೊಮ್ಮಾಯಿ ಈಗಾಗಲೇ ಸಭೆ ನಡೆಸಿದ್ದಾರೆ. ಹಿಜಾಬ್ ಪ್ರಕರಣವು ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದ್ದು, ಸದ್ಯ ತೀರ್ಪು ಬರುವವರೆಗೆ ಯಾವುದೇ ಧಾರ್ಮಿಕ ಗುರುತಿನ ವಸ್ತ್ರ ಧರಿಸದಂತೆ ಕರ್ನಾಟಕ ಹೈಕೋರ್ಟ್ ಹೇಳಿದೆ.
nagesh