ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಪಲ್ಟಿ ➤ ಹಲವರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ತುಂಬೆ ಬಿಎ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ.


ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಕಾಲೇಜು ಬಳಿ ತಿರುವಿನಲ್ಲಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

Also Read    ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಮೃತ  ಪ್ರಕರಣ ➤ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು

 

error: Content is protected !!