ಸೇತುವೆಯ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆಗೈದ ಯುವಕ..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 16. ಪಾವಂಜೆ ಸೇತುವೆಯ ಬಳಿ ಯುವಕನೋರ್ವ ಬೈಕ್ ನಿಲ್ಲಿಸಿ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿ ಬುಧವಾರದಂದು ನಡೆದಿದೆ.


ಮೃತ ಯುವಕನನ್ನು ಸುಚೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ಇವರು ಬುಧವಾರದಂದು ಬೆಳಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಸುಮಾರು ಹನ್ನೊಂದು ಗಂಟೆಯ ವೇಳೆಗೆ ಸೇತುವೆಯಿಂದ ನದಿಗೆ ಹಾರಿದ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಆಗಮಿಸಿದ ಮುಲ್ಕಿ ಪೊಲೀಸರು ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top