ಡಿಗ್ರಿ ಪರೀಕ್ಷೆ ಒಂದು ತಿಂಗಳು ಮುಂದೂಡಲು ವಿವಿಗೆ ಸೂಚನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 17. ಕೊರೋನಾ ಹಾಗೂ ರೂಪಾಂತರಿ ತಳಿ ಒಮಿಕ್ರಾನ್ ಹೆಚ್ಚಳದ ಹಿನ್ನೆಲೆ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿವಿಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ಅವರು ವಿವಿಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದೆವು. ಆದರೆ ಮೇಲಿನ ಕಾರಣವನ್ನು ನೀಡಿ ಕಾಲೇಜು ಶಿಕ್ಷಣ ಇಲಾಖಾ ಆಯುಕ್ತರು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿಯಿಂದ ಪರೀಕ್ಷೆ ಮುಂದೂಡಿಕೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ಅರಿವು ಸಾಲ ಯೋಜನೆ- ಅರ್ಜಿ ಆಹ್ವಾನ

 

 

error: Content is protected !!
Scroll to Top