ಕೌಟುಂಬಿಕ ಕಲಹ- ಪೊಲೀಸ್ ಪೇದೆ ದಂಪತಿಗಳಿಂದ ಆತ್ಮಹತ್ಯೆಗೆ ಯತ್ನ…! ➤ ಪತ್ನಿ ಮೃತ್ಯು, ಪತಿ ಪಾರು



(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ. 17. ಕೌಟುಂಬಿಕ ಕಲಹದ ಹಿನ್ನೆಲೆ ಪೊಲೀಸ್ ಪೇದೆ ಹಾಗೂ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಪಾರಾದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಣಕನೂರು ಬಳಿ ನಡೆದಿದೆ.








ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಕುಮಾರ್ ಮತ್ತು ಅವರ ಪತ್ನಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು, ಪತಿ ಸುರೇಂದ್ರ ಕುಮಾರ್ ಅವರು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದ ಅವರ ಪತ್ನಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ. ಪೇದೆ ಸುರೇಂದ್ರ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.






error: Content is protected !!
Scroll to Top