ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಬೆಂಬಲಿಸಿದ ಇತರ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ…! ➤ ಉಪ್ಪಿನಂಗಡಿ ಕಾಲೇಜಿಗೆ ಎರಡು ದಿನ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಫೆ. 17. ಹಿಜಾಬ್‍ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡದೇ ಇರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ನಿಂತ ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಬಳಿಕ ಇನ್ನಷ್ಟು ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ಪ್ರಾಂಶುಪಾಲರು ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ. ನಂತರ ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿಕೊಟ್ಟು, ಕಾಲೇಜು ಕೊಠಡಿಯೊಳಗೆ ಸಮವಸ್ತ್ರ ಮಾತ್ರ ಬಳಸಲು ಅವಕಾಶವೆಂದು ತಿಳಿಸಿದರು. ಈ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲೇ ಕುಳಿತುಕೊಂಡರು. ಈ ಸಂದರ್ಭ ಅವರನ್ನು ಬೆಂಬಲಿಸಿದ ಕೆಲ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಹೊರಗಡೆ ಬಂದು ಕುಳಿತುಕೊಂಡಿದ್ದಾರೆ. ಪರಿಸ್ಥಿತಿಯ ಸೂಕ್ಷ್ಮತೆ ಮನಗಂಡ ಪ್ರಾಂಶುಪಾಲರು ಇನ್ನು ಕಾಲೇಜಿನಲ್ಲಿ ಯಾವುದೇ ಗೊಂದಲಗಳಾಗುವುದು ಬೇಡ ಎಂದು ಎರಡು ದಿನ ಕಾಲೇಜಿಗೆ ರಜೆ ಸಾರಿದ್ದಾರೆ.

error: Content is protected !!

Join the Group

Join WhatsApp Group