ಕಡಬ: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರ ಮೃತದೇಹವು ಕಡಬ ಪೇಟೆಯ ಸಮುದಾಯ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ದಾಮ್ರೋಡಿ ನಿವಾಸಿ ಕುಮಾರ್(48) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕುಮಾರ್ ವಿಪರೀತ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಇದರಿಂದಾಗಿ ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

 

 

 

error: Content is protected !!
Scroll to Top