ಪೂಂಜಾಲಕಟ್ಟೆ ಠಾಣಾ ಪಿಎಸ್ಐ ಸೌಮ್ಯ ಜೆ ವೇಣೂರು ಠಾಣೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 03. ಪೂಂಜಾಲಕಟ್ಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪಿಎಸ್‌ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ತಿಳಿಸಿದ್ದಾರೆ.

Scroll to Top