ಅಕ್ರಮ ಗೋಸಾಗಾಟ…!! ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 08. ಅಕ್ರಮ ಗೋಸಾಗಾಟವನ್ನು ತಡೆಹಿಡಿದ ಭಜರಂಗದಳ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ.

ಮನೆಗಳಿಂದ ಗುಜರಿ ಸಾಗಾಟದ ನೆಪದಲ್ಲಿ ದನಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯ ವೇಳೆ ದನಸಾಗಾಟ ಮಾಡುತ್ತಿದ್ದ ಯಾವುದೇ ದಾಖಲೆಗಳಿಲ್ಲದ ಪಿಕಪ್ ವಾಹನ ಹಾಗೂ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

error: Content is protected !!
Scroll to Top