ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ..!! ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 08. ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ಮಗ ಮೃತಪಟ್ಟು, ತಂದೆ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ.


ಮೃತರನ್ನು ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಎಂದು ಗುರುತಿಸಲಾಗಿದೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಡೋಳಿಯ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆಯ ಜೊತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Also Read  ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

error: Content is protected !!