(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ.
ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರಿನ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದರಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಸಚಿನ್ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿದ ಬೈಕ್ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.