ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ➤ ಕಡಬದ ಯುವಕ ಮೃತ್ಯು…!!



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ.








ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಈತ ಮಾ. 09ರಂದು ಬೆಳಿಗ್ಗೆ 3:30 ಗಂಟೆಗೆ ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಬಪ್ಪನಾಡು ತಲುಪುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರ ತಲೆ ಹೆದ್ದಾರಿ ಡಿವೈಡರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






 

error: Content is protected !!
Scroll to Top