ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 11. ಐದು ದಿನಗಳ ಹಿಂದೆ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಮೃತರನ್ನು ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಎಂದು ಗುರುತಿಸಲಾಗಿದೆ. ಇವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು. ಮಾ. 06ರ ಸಂಜೆ ವೇಳೆಗೆ ಗೋಡೆಯ ಮೇಲೆ ಹತ್ತಿದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ಸಿಲ್ವೆಸ್ಟರ್‌ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಪಟಾಕಿ ದುರಂತ: 154 ಮಂದಿ ಗಾಯ

 

 

error: Content is protected !!
Scroll to Top