(ನ್ಯೂಸ್ ಕಡಬ) newskadaba.com ತುಮಕೂರು, ಮಾ. 14. ಬಾಗಿಲು ಮುರಿದು ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.
17 ವರ್ಷದ ಮಗಳ ಅಪಹರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಬಾಗಿಲು ಮುರಿದ ಅಪಹರಣಕಾರರು ಮನೆಯೊಳಗೆ ನುಗ್ಗಿ ಬಾಲಕಿಯನ್ನು ಕಿಡ್ನಾಪ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.