(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಹಿರಿಯ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡಿರುವ ಅವರು ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತರಾಗಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ದಯಾಸುಂದರ್ ಮನೆ ಮತ್ತು ಕುಲಶೇಖರದಲ್ಲಿನ ಕಚೇರಿ ಮೇಲೆ ಏಕಾಏಕಿ ದಾಳಿ ಮಾಡಿದ ಎಸಿಬಿ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ನಿರತವಾಗಿದೆ.