ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹಿನ್ನೆಲೆ ➤ ಕಡಬ ತಾಲೂಕಿನಲ್ಲಿ ಮುಸ್ಲಿಂ ವ್ಯಾಪಾರಸ್ಥರಿಂದ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಂಘಟನೆಗಳು ಗುರುವಾರದಂದು ಕರೆ ನೀಡಿದ್ದ ರಾಜ್ಯ ಬಂದ್‌ಗೆ ಕಡಬ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ತಾಲೂಕಿನ ಮುಸ್ಲಿಮರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮುಚ್ಚಿ ಸಮುದಾಯದ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು. ಮುಸ್ಲಿಮರ ಹೊಟೇಲ್, ಹೂವು ಅಂಗಡಿ, ಚಪ್ಪಲಿ, ಬಟ್ಟೆ ಸೇರಿದಂತೆ ಹೆಚ್ಚಿನ ಎಲ್ಲಾ ಅಂಗಡಿಗಳು ಮುಚ್ಚಿದ್ದವು.

 

Scroll to Top