ಸುಳ್ಯ: ಜೀಪ್ – ಸ್ಕೂಟರ್ ನಡುವೆ ಅಪಘಾತ ➤ 9ನೇ ತರಗತಿಯ ಓರ್ವ ವಿದ್ಯಾರ್ಥಿ ಮೃತ್ಯು, ಮತ್ತೋರ್ವ ಗಂಭೀರ



(ನ್ಯೂಸ್ ಕಡಬ) newskadaba.com ಸುಳ್ಯ, ಮಾ.23. ಜೀಪ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ಸುಳ್ಯ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ.







ಮೃತ ವಿದ್ಯಾರ್ಥಿಯನ್ನು ಸುಳ್ಯದ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ವಿಶ್ವದೀಪ್ ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ದರ್ಶನ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






 

 

error: Content is protected !!
Scroll to Top