ಏಳು ದಿನದ ಮಗುವಿದ್ದ ಬ್ಯಾಗನ್ನು ಬಸ್ ನಿಲ್ದಾಣದಲ್ಲಿಟ್ಟು ಪರಾರಿಯಾದ ದಂಪತಿ ➤ ಸಾರ್ವಜನಿಕರಿಂದ ಮಗುವಿನ ರಕ್ಷಣೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಎ.25. ನವಜಾತ ಶಿಶುವನ್ನು ಬ್ಯಾಗ್ ನಲ್ಲಿಟ್ಟು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಘಟನೆ ಭಾನುವಾರದಂದು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ‌ ನಡೆದಿದೆ.

ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಬ್ಯಾಗೊಂದು ಕಂಡುಬಂದಿದ್ದು, ಬ್ಯಾಗ್ ಅಲುಗಾಡುವುದನ್ನು ಗಮನಿಸಿದ ಸಾರ್ವಜನಿಕರು ಬ್ಯಾಗ್ ತೆರೆದಾಗ ನವಜಾತ ಶಿಶು ಕಂಡುಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಅನೈತಿಕ ಸಂಬಂಧದಿಂದ ಮಗು ಜನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗುವಿನ ಹೆತ್ತವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

 

Scroll to Top