ಕಡಬ: ಅಂಗಡಿಯ ಶಟರ್ ಮುರಿದು ಒಳ ನುಗ್ಗಿದ ಕಳ್ಳರು ➤ ನಾಲ್ಕು ಲಕ್ಷ ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಎ.28. ಅಂಗಡಿಯೊಂದರ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ನಾಲ್ಕೂವರೆ ಲಕ್ಷ ನಗದನ್ನು ದೋಚಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ.

ಕಳಾರ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಅಂಗಡಿಯ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಅಂಗಡಿಯಲ್ಲಿಟ್ಟಿದ್ದ ನಾಲ್ಕೂವರೆ ಲಕ್ಷ ನಗದನ್ನು ಎಗರಿಸಿರುವುದಾಗಿ ಇಸ್ಮಾಯಿಲ್ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಕಡಬ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Scroll to Top