(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕಾರನ್ನು ಚಲಾಯಿಸುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ಕಳೆದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಡಬ – ಪಂಜ ರಸ್ತೆಯ ಮೆಸ್ಕಾಂ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ಕಡಬ ಸ.ಪ.ಪೂ.ಕಾಲೇಜಿನ ಉಪನ್ಯಾಸಕ ವಾಸುದೇವ ಕೋಲ್ಪೆಯವರು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೆಸ್ಕಾಂ ಸಮೀಪ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಉಪನ್ಯಾಸಕ ವಾಸುದೇವರವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.