ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.07. ನವವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸುಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಳ್ಯದ ಗಾಂಧಿನಗರ ನಿವಾಸಿ ಆಮಿನಾ ಎಂಬವರ ಪುತ್ರಿ ಆಯಿಷಾ ಎಂದು ಗುರುತಿಸಲಾಗಿದೆ. ಗಾಂಧಿನಗರದ ಕೆರೆಮೂಲೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಆಯಿಷಾ ಮನೆಯ ಫ್ಯಾನ್ ಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಆಯಿಷಾರವರಿಗೆ ಎಂಟು ತಿಂಗಳ ಹಿಂದೆಯಷ್ಟೇ ಕಾಸರಗೋಡು ಮೂಲದ ಯುವಕನೊಂದಿಗೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Also Read  ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ !

 

 

error: Content is protected !!
Scroll to Top