(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.16. ರಾಜ್ಯದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.18 ರಂದು ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ವರದಿಯಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 17 ಮತ್ತು 19 ರಂದು ಭಾರೀ ಗಾಳಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 18 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕರು ಮತ್ತು ಮೀನುಗಾರರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.