ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 31. ರವಿವಾರದಂದು ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ಹಿನ್ನೆಲೆ ಕುಟುಂಬದ ಅನುಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆಯು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದೆ. ಚೆನ್ನೈನ ತಂಡವು ಖಾಸಗಿ ವಿಮಾನ್ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Scroll to Top