ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..!



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 04. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿಯಾಗಿ ಅಪ್ಪ ಮಗಳು ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠ ಸಮೀಪದ ಸೂರಲ್ಪಾಡಿ ಎಂಬಲ್ಲಿ ಸಂಭವಿಸಿದೆ.







ಮೃತ ದುರ್ದೈವಿಗಳನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ ಹಾಗೂ ಪುತ್ರಿ ಅಶ್ವಿನಿ ಎಂದು ಗುರುತಿಸಲಾಗಿದೆ. ಪುಂಡಲೀಕಪ್ಪ ಅವರಿಗೆ ತೀರಾ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕುಟುಂಬ ಸಮೇತರಾಗಿ ಬರುತ್ತಿದ್ದ ವೇಳೆ ಜೂ. 3ರ ನಸುಕಿನ ಜಾವ ರಾ.ಹೆ 169ರಲ್ಲಿ ಗಂಜಿಮಠ ಸೂರಲ್ಪಾಡಿ ಎಂಬಲ್ಲಿ ರಸ್ತೆ ಬದಿಯ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅಶ್ವಿನಿ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುಂಡಲೀಕ ಅವರನ್ನು ಅಲ್ಲಿಂದ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top