ಸವಾರನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್..!! ➤ ಯುವಕ ಪಾರು

(ನ್ಯೂಸ್ ಕಡಬ) newskadaba.com ಕೇರಳ, ಜೂ. 04. ಬೈಕ್ ಸವಾರನೋರ್ವ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯಲ್ಲಿ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬೈಕ್ ಸವಾರ ವಿಷ್ಣುಪ್ರಸಾದ್ ದೊಡ್ಡ ಅನಾಹುತದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಈತ ಬೈಕ್ ನ್ನು ಅತ್ಯಂತ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಈ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ಮೂರು ಪಲ್ಟಿ ಹೊಡೆದು ಟ್ರಾನ್ಸ್ ಪಾರ್ಮರ್ ಏರಿದೆ. ಘಟನೆಯ ಬಳಿಕ ಕೇರಳ ವಿದ್ಯುತ್ ಬೋರ್ಡ್ ಅಧಿಕಾರಿಗಳು ವಿದ್ಯುತ್ ಸ್ಥಗಿತಗೊಳಿಸಿ ಹೆಚ್ಚಿನ ಅನಾಹುತವಾಗದಂತೆ ತಡೆದಿದ್ದಾರೆ.

Also Read  ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                               

error: Content is protected !!