(ನ್ಯೂಸ್ ಕಡಬ) newskadaba.com ಪುತ್ತೂರು, ನ.10. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯು ಜಿಲ್ಲೆಯ ಮೂರು ಕಡೆಗಳಿಗೆ ಆಗಮಿಸಿದ್ದು, ಸಮಾವೇಶ ಅದ್ಧೂರಿಯಾಗಿ ನಡೆಯಿತು.
ಶುಕ್ರವಾರದಂದು ಬೆಳಿಗ್ಗೆ ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸುಳ್ಯದಲ್ಲಿ ಬೃಹತ್ ಸಮಾವೇಶ ನಡೆಯಿತು. ನಂತರ ಅಪರಾಹ್ನ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಾಗೂ ಸಂಜೆ ಬೆಳ್ತಂಗಡಿಯಲ್ಲಿ ಸಮಾವೇಶ ನಡೆಯಿತು.
ಪರಿವರ್ತನಾ ಯಾತ್ರೆಯ ರಥದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದರಾದ ನಳಿನ್‌ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೃಷ್ಣ ಪಾಲೇಮಾರ್, ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಜಿ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸೇರುವುದರೊಂದಿಗೆ ಪರಿವರ್ತನಾ ಯಾತ್ರೆ ಯಶಸ್ವಿಯಾಯಿತು.