ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಕಾರು ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 06. ಇನೋವಾ ಕಾರೊಂದು ಪಲ್ಟಿಯಾಗಿ ಇಪ್ಪತ್ತು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.


ಸಿಗಂದೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top