(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ರೌಡಿಶೀಟರ್ ಓರ್ವನಿಗೆ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ರೌಡಿಶೀಟರ್ ನ್ನು ಬೈಕಂಪಾಡಿ ಮೀನಕಳಿ ನಿವಾಸಿ ರಾಘವೇಂದ್ರ ಅಲಿಯಾಸ್ ರಾಜ(29) ಎಂದು ಗುರುತಿಸಲಾಗಿದೆ. ಈತ ಸೋಮವಾರದಂದು ಸಂಜೆ ಬೀಚ್ ನಲ್ಲಿದ್ದ ವೇಳೆ ದುಷ್ಕರ್ಮಿಗಳು ಈತನಿಗೆ ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












