(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ದ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:- ಜೂ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಲ್ಕಿ ತಾಲೂಕಿನ ಮುಲ್ಕಿ ನಗರದ ಸಮುದಾಯ ಭವನದಲ್ಲಿ, ಜೂ.16ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಹಾಗೂ ಜೂ.21ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು. ಅರ್ಜಿದಾರರು ಅಫಿದಾವಿತ್ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯನ್ನು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್ ಅಂಬೇಡ್ಕರ್ ವೀಧಿಯಲ್ಲಿರುವ ಬಹುಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0824-2950997, 9243456629, ಪೆÇಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.