ಬೆಳ್ತಂಗಡಿ: ಬೈಕ್ ಗಳ ನಡುವೆ ಢಿಕ್ಕಿ ➤‌ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ಬೈಕ್ ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ವೇಳೆ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಚಾರ್ಮಾಡಿ ಪಂಡಿಕಟ್ಟೆ ಎಂಬಲ್ಲಿ ನಡೆದಿದೆ.







ಮೃತ ಯುವಕನನ್ನು ಚಾರ್ಮಾಡಿ ಮೇಗಿನಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ ಮೇಗಿನಮನೆ (24) ಎಂದು ಗುರುತಿಸಲಾಗಿದೆ. ಚಾರ್ಮಾಡಿಯಲ್ಲಿನ ಸ್ನೇಹಿತನ ಮನೆಗೆಂದು ತೆರಳಿ ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಪಂಡಿಕಟ್ಟೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಗೆ ಎಸೆಯಲ್ಪಟ್ಟ ನಝೀರ್ ನ ಮೇಲೆ ಟ್ರಕ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

error: Content is protected !!
Scroll to Top