ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂಬ್ರ, ಜೂ. 09. ನಿವೃತ್ತ ಅರಣ್ಯಾಧಿಕಾರಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಡೆದಾಡಲು ಕಷ್ಟಪಡುತ್ತಿದ್ದು, ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!

Join the Group

Join WhatsApp Group