ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.11. ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ಶನಿವಾರದಂದು ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಆರೋಪಿಗಳು ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಮನೋಜ್ ಎಂಬಿಬ್ಬರು ಆರೋಪಿಗಳ ಕಾಲಿಗೆ ಗುಂಡು ಹೊಡೆದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ನಾಗೇಂದ್ರ, ಎಎಸ್ಐ ಡೇವಿಡ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ...!! 

 

error: Content is protected !!
Scroll to Top