ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಒಂದೂವರೆ ತಿಂಗಳ ನಂತರ ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ 3 ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ.

Also Read  ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭ ► ಸುಳ್ಯದಲ್ಲಿ ಅಂಗಾರ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಮುನ್ನಡೆ

 

 

error: Content is protected !!
Scroll to Top