ಧರ್ಮಸ್ಥಳಕ್ಕೆ ಬರುತ್ತಿದ್ದ ಯಾತ್ರಾರ್ಥಿಗಳ ಕಾರು ಅಪಘಾತ ➤ ತಂದೆ- ಮಗ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19. ಕಾರು ಹಾಗೂ ಕ್ಯಾಂಟರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆಂದು 2 ಕಾರಿನಲ್ಲಿ 10 ಜನ ತೆರಳುತ್ತಿದ್ದ ವೇಳೆ, ಅದರಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Also Read  ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ

error: Content is protected !!