ನೇಕಾರರ 50 ಸಾವಿರ ರೂ. ಸಾಲ ಮನ್ನಾ ► ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.





ಜಿಲ್ಲಾಡಳಿತ ಮಂಡಳಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ನೇಕಾರರ ಸಾಲವನ್ನು ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರದಿಂದ 9,000 ನೇಕಾರರಿಗೆ ಲಾಭವಾಗಲಿದೆ. ಈ ಉದ್ದೇಶಕ್ಕೆ ಒಟ್ಟಾರೆ ರೂ.52 ಕೋಟಿ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.






error: Content is protected !!
Scroll to Top