ಜುಲೈ 03ರಂದು ದೇರಳಕಟ್ಟೆಯ RKC ವಂಡರ್ ಸಿಟಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ 350 ನೇ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ” ಎಂಬ ಧ್ಯೇಯದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ರಿ. ಸಂಸ್ಥೆಯ‌ ದಾಖಲೆಯ 350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ದಿನಾಂಕ ಜುಲೈ 3ರಂದು RKC ವಂಡರ್ ಸಿಟಿ ನಾಟೆಕಲ್ ದೇರಳಕಟ್ಟೆ – ಮಂಗಳೂರಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯಲಿದೆ.

ಬಹು ನಿರೀಕ್ಷಿತ ರಕ್ತದಾನ ಶಿಬಿರ ಇದಾಗಿದ್ಧು, ಈ ಕಾರ್ಯಕ್ರಮದಲ್ಲಿ ವಿಶೇಷ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರಮ ಇದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ. ಕಳೆದ ಒಂಭತ್ತು ವರ್ಷಗಳಿಂದ ಸೇವಾ ರಂಗದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯು ಹಲವು ದಾಖಲೆಗಳನ್ನು ಸೃಷ್ಟಿಸಿದ್ದು, ಕೇವಲ ರಕ್ತದಾನ ಮಾತ್ರವಲ್ಲದೆ ಸಾಮಾಜಿಕ ಸೇವೆಯಲ್ಲೂ ಮುಂದುವರಿದಿದೆ.
ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಹಿತೈಷಿಗಳು ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೊಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group