ಪೆರಾಬೆ: ಗ್ರಾ.ಪಂ. ಅಧ್ಯಕ್ಷರ ಸಹಿತ ಮೂವರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಮೂವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಸುಮಾರು ಏಳು ಮಂದಿಯ ತಂಡ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರದಂದು ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ.

ಹಲ್ಲೆಗೊಳಗಾದ ಮೋಹನ್ ದಾಸ್ ರೈ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಪೋಲಿಸರಿಗೆ ದೂರು ನೀಡಿದ ಅವರು, ನಾನು ಜೂ.24ರಂದು ಕುಂತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಹೋಗಿ ಬಳಿಕ ನನ್ನ ಕಾರಿನಲ್ಲಿ ಹಳೇನೆರಂಕಿಯ ಕೃಷಿ ಜಮೀನಿಗೆ ಹೋಗಿ ಅಲ್ಲಿ ಕೆಲಸ ಮಾಡಿ ನನ್ನ ಕೃಷಿ ಜಮೀನಿನಲ್ಲಿ ಕೆಲಸ ಮಾಡುವ ಅಲಂಕಾರು ನಿವಾಸಿ ರಾಘವ ಎಂಬವರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ವಾಪಾಸ್ಸು ಮನೆ ಕಡೆಗೆ ಬರುತ್ತಿರುವಾಗ ಅಲಂಕಾರು ಪೇಟೆಯಲ್ಲಿದ್ದ ಪರಿಚಯದ ಶಿವರಾಮ ಎಂಬವರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ರಾತ್ರಿ 08.45 ಗಂಟೆಗೆ ಅಲಂಕಾರಿನಿಂದ ಪೆರಾಬೆ ತನ್ನ ಮನೆ ಕಡೆಗೆ ಹೋಗುತ್ತಿರುವಾಗ ಕುಂತೂರು ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಲುಪುತಿದ್ದಂತೆ ಅದೇ ರಸ್ತೆಯಲ್ಲಿ ಜನರ ಗುಂಪು ಸೇರಿಕೊಂಡು ಯಾವುದೋ ವಿಚಾರ ಮಾತನಾಡುತ್ತಿದ್ದು ನಂತರ ಆ ಗುಂಪಿನಲ್ಲಿದ್ದ ನನ್ನ ಪರಿಚಯದ ಇಬ್ರಾಹಿಂ ಎಂಬವರು ಕಾರಿನ ಬಳಿ ಬಂದು ನನ್ನ ಅಳಿಯ ಯಾವುದೋ ವಾಟ್ಸಾಪ್ ವಿಚಾರವಾಗಿ ಸಮಸ್ಯೆ ಮಾಡಿಕೊಂಡಿದ್ದು ಬಗೆಹರಿಸುವಂತೆ ಕೇಳಿಕೊಳ್ಳುತ್ತಿರುವ ಸಮಯ ಜನರ ಗುಂಪಿನಲ್ಲಿದ್ದ ರಾಜೀಕ್, ಜುಬೈರ್, ಜುನೈದ್, ಮೊಯಿದು ಕುಂಞಿ, ಸಂಶು, ಅಮನ್, ಸಾಹುಲ್ ಹಮೀದ್ ಹಾಗೂ ಇತರರು ನನ್ನ ಕಾರಿನ ಹತ್ತಿರ ಬಂದು ನನ್ನನ್ನು ಕಾರಿನಿಂದ ಎಳೆದು ಅವಾಚ್ಯ ಶಬ್ದದಿಂದ ಬೈದು ಹಲ್ಲೆ ಮಾಡಿದ್ದು ಬಳಿಕ ಆರೋಪಿತ ರಾಝಿಕ್ ಎಂಬಾತನು ಕೈಯಲ್ಲಿದ್ದ ಕತ್ತಿಯನ್ನು ನನ್ನ ಮೇಲೆ ಬೀಸಿದ್ದು ಈ ವೇಳೆ ಕತ್ತಿಯು ನನ್ನ ಜತೆಗಿದ್ದ ಶಿವರಾಮ ಎಂಬವರ ಬೆನ್ನಿನ ಬಲಬದಿಗೆ ತಾಗಿ ಗಾಯವಾಗಿದೆ. ಕೂಡಲೇ ಹಲ್ಲೆಯಿಂದ ಗಾಯಗೊಂಡ ಶಿವರಾಮರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸುತ್ತಿದ್ದ ವೇಳೆ ಪುನ: ಆರೋಪಿಗಳು ನನ್ನ ಕಾರನ್ನು ತಡೆದು ನಿಲ್ಲಿಸಿ ನೀನು ನಮ್ಮವರ ವಿಚಾರಕ್ಕೆ ಬಂದರೆ ನಿನ್ನನ್ನು ಮುಂದಕ್ಕೆ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೀದಿನಾಯಿಗಳ ದಾಳಿಗೆ ತುತ್ತಾಗಿ ನಾಲ್ಕೂವರೆ ವರ್ಷದ ಬಾಲಕ ಮೃತ್ಯು

 

ಘಟನೆಗೆ ಸಂಬಂಧಿಸಿ ಕಡಬ ಪೋಲಿಸರು ರಾತ್ರಿಯೇ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ತಡರಾತ್ರಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಕಡಬಕ್ಕೆ ಆಗಮಿಸಿದ್ದಾರೆ. ಕಡಬ ಎಸ್.ಐ. ಆಂಜನೇಯ ರೆಡ್ಡಿ, ತನಿಖಾ ಎಸ್.ಐ. ಶ್ರೀಕಾಂತ್ ರಾಥೋಡ್ ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Also Read  ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

error: Content is protected !!
Scroll to Top