ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ➤ ದೈಹಿಕ ಶಿಕ್ಷಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಕಲೇಶಪುರ, ಜೂ. 25. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಶಿಕ್ಷಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕಿರುವಾಲೆ ಸಮೀಪ ನಡೆದಿದೆ.

ಮೃತ ಶಿಕ್ಷಕನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ತಾಲೂಕಿನ ಬಾಳುಪೇಟೆ ಗ್ರಾಮದ ಬಿ.ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಎಂದಿನಂತೆ ಇಂದು ಬೆಳಗ್ಗೆ ಶಾಲೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..!

error: Content is protected !!
Scroll to Top