ಸೇತುವೆಯಿಂದ ಉರುಳಿಬಿದ್ದ ಲಾರಿ ➤ ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 25. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತೋಡಿಗೆ ಬಿದ್ದು ಓರ್ವ ಮೃತಪಟ್ಟ ಘಟನೆ ನೀಲೇಶ್ವರ ಪರಪಚ್ಚಾಲ್ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮೃತಪಟ್ಟವರನ್ನು ಪಾಲಕ್ಕಾಡ್ ಮಣ್ಣಾರಕಾಡ್ ನ ಹಬೀಬ್ ಎಂದು ಗುರುತಿಸಲಾಗಿದೆ. ಚಾಲಕ ರಹೀಂ ಗಾಯಗೊಂಡಿದ್ದಾರೆ. ನೀಲೇಶ್ವರದ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯು ಪರಪಚ್ಚಾಲ್ ಎಂಬಲ್ಲಿ ಸೇತುವೆಯಿಂದ ತೋಡಿಗೆ ಬಿದ್ದಿದ್ದು, ಪರಿಣಾಮ ಅದರಲ್ಲಿದ್ದ ಇಬ್ಬರು ಲಾರಿಯಡಿಗೆ ಸಿಲುಕಿದ್ದರು. ತಕ್ಷಣವೇ ಸ್ಥಳೀಯ ನಿವಾಸಿಗಳು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಇಬ್ಬರನ್ನೂ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದರೂ ಹಬೀಬ್ ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಕಾಸರಗೋಡು ಆಸ್ಪತ್ರೆ ಆವರಣದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

error: Content is protected !!
Scroll to Top