(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 26. ಬಾಕ್ಸೈಟ್ ಸಾಗಾಟದ ಲಾರಿಯೊಂದು ಆಕ್ಟೀವಾಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆಯೇ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ ಬೊಬ್ಬೆಕೇರಿ ಪೆಟ್ರೋಲ್ ಬಂಕ್ ಬಳಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು ಸವಾರೆ ಮಹಿಳೆಯ ಕೈಗೆ ಗಂಭೀರ ಗಾಯಗಳಾಗಿದೆ.