ವಿಟ್ಲ: ಮಹಿಳೆಗೆ ಚೂರಿ ಇರಿತ..!!



(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ವಿಟ್ಲದ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ.







ಹಲ್ಲೆಗೊಳಗಾದವರನ್ನು ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ. ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top