ಅಪರಾಧಿಗಳನ್ನು ಬಂಧಿಸುವ ವೇಳೆ ಪೊಲೀಸರು ಬಾಡಿ ಕ್ಯಾಮೆರಾ ಧರಿಸಲೇಬೇಕು ➤ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 29. ಇನ್ಮುಂದೆ ಪೊಲೀಸರು ಆರೋಪಿಗಳನ್ನು ಬಂಧಿಸುವಾಗ ಕೈ ಕೋಳ ತೊಡಿಸುವ ಪೊಲೀಸರು ಬಾಡಿ ಕ್ಯಾಮರಾ ಧರಿಸಿರಲೇಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.


ಪೊಲೀಸರು ಆರೋಪಿಗಳನ್ನು ಬಂಧಿಸುವಾಗ ಬ್ಯಾಡಿ ಕ್ಯಾಮರಾ ಧರಿಸಿ ಬಂಧಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋದಲ್ಲಿ ದಾಖಲಿಸಬೇಕಾಗುತ್ತದೆ. ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯನ್ನು ಕಾನೂನುಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಸರ್ಕಾರಕ್ಕೆ 2 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 30 ವರ್ಷದ ಸುಪ್ರೀತ್ ಇಶ್ವತ್ ದಿವಟೆ, ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕೆ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯಪೀಠವು ಈ ಆದೇಶ ಹೊರಡಿಸಿದೆ.

 

error: Content is protected !!

Join the Group

Join WhatsApp Group