(ನ್ಯೂಸ್ ಕಡಬ) newskadaba.com ಕಡಬ, ಜೂ. 29. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ಕಡಬ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.
ವಿದ್ಯಾರ್ಥಿ ಸಂಘವನ್ನು ಉದ್ಘಾಟನೆಗೈದ ಕೊಕ್ಕಡ ಸ.ಪ.ಪೂ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ರೈ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ವಿದ್ಯಾರ್ಥಿ ಸಂಘಟನೆಯು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ಉತ್ತಮ ನಾಯಕರಾಗಲು ಪ್ರೇರೆಪಿಸುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ.ಅರುಣ್ ವಿಲ್ಸನ್ ಲೋಬೋರವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಭೋದಿಸಿದರು. ಕಾಲೇಜು ವಿದ್ಯಾರ್ಥಿ ಸಂಘದ ನಿರ್ದೇಶಕ ರಾಜೇಶ್ ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಸೈಮನ್ ಲೂಯಿಸ್ ರೋಡ್ರಿಗಸ್, ಸೈಂಟ್ ಆನ್ಸ್ ಪ್ರೌಢಶಾಲಾ ಪ್ರಾಚಾರ್ಯರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಚಾರ್ಯರಾದ ಕಿರಣ್ ಕುಮಾರ್, ಹಿಂದಿ ಉಪನ್ಯಾಸಕ ಮ್ಯಾಥ್ಯೂ ಇಜೆ, ಪ್ರೌಢಶಾಲಾ ವಿಭಾಗದ ಉಪಾಧ್ಯಕ್ಷೆ ಅಂಜು ರವೀಂದ್ರ, ಕಾಲೇಜು ವಿದ್ಯಾರ್ಥಿ ನಾಯಕ ಶ್ರೀಹರಿ ಎವಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಮುಹಮ್ಮದ್ ಕನಝ್ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಲತಾ ಸ್ವಾಗತಿಸಿ, ಉಪನ್ಯಾಸಕಿ ಸುಜಾ ವಿಜೆ ಕಾರ್ಯಕ್ರಮ ನಿರೂಪಿಸಿದರು.