(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 05. ಮಾನವಗುರು, ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.

ಭಕ್ತರ ಸೋಗಿನಲ್ಲಿ ಬಂದ ಆಗಂತುಕನೋರ್ವ ಚಂದ್ರಶೇಖರ್ ಗುರೂಜಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಪರಾರಿಯಾಗುತ್ತಿರುವ ದೃಶ್ಯ ವೈರಲ್ ಆಗಿದೆ. ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲಿಸ್ ಆಯುಕ್ತ ಲಾಬೂರಾಮ್ ಭೇಟಿ ನೀಡಿ ಸಿಸಿಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.














