ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಅರಂತೋಡು, ಜು. 05. ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ಅರಂತೋಡಿನಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ ಕಾರು, ಬಸ್ಸಿಗೆ ಸೈಡು ಕೊಡಲು ಎಡ ಬದಿಗೆ ತಿರುಗಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಕರಿದ್ದು, ಧರ್ಮಸ್ಥಳ ದೇವರ ದರ್ಶನ ಮುಗಿಸಿ ಮೈಸೂರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

Scroll to Top