(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 06. ಶಾಂತಿಅಂಗಡಿ ನಿವಾಸಿ ಮಹಮ್ಮದ್ ಆಸೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಆಸಿಫ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಸೋಮವಾರ ಮಧ್ಯರಾತ್ರಿ 1 ಗಂಟೆಯ ವೇಳೆಗೆ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚೂರಿಯಿಂದ ಇರಿದು ಆಸಿಪೊ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.