ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ



(ನ್ಯೂಸ್ ಕಡಬ) newskadaba.com ಮಾಣಿ, ಜು. 06. ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸಂಜೆ ಕೊಡಾಜೆಯಲ್ಲಿ ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಝೀರ್ ಎಂದು ಗುರುತಿಸಲಾಗಿದೆ. ನಝೀರ್ ಇಂದು ಸಂಜೆ ಕೊಡಜೆಯ ಪ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ಬುಡೋಳಿ ನಿವಾಸಿಗಳಾದ ಇವರು ಇತ್ತೀಚೆಗೆ ಕೊಡಾಜೆಯಲ್ಲಿ ವಾಸಿಸುತ್ತಿದ್ದರು. ಉಪ್ಪಳದಲ್ಲಿ ಕೆಲಸದಲ್ಲಿದ್ದ ಈತ ಎರಡು ದಿನಗಳ‌ ಹಿಂದೆಯಷ್ಟೇ ಮನೆಗೆ ಬಂದಿದ್ದು, ಇಂದು‌ ಮನೆಯಲ್ಲಿ ಎಲ್ಲರೂ ಇದ್ದ ವೇಳೆ ಈತ ಮಾತ್ರ ಕೊಠಡಿಗೆ ಚಿಲಕ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದೆ.






 

error: Content is protected !!
Scroll to Top