ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ ➤ ಮೂವರು ಮೃತ್ಯು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾರ್ಮಿಕರು ಉಳಿದುಕೊಂಡ ಶೆಡ್ ನ ಮೇಲೆ ಗುಡ್ಡ ಕುಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಪಾಲಕ್ಕಾಡು ನಿವಾಸಿ ಬಿಜು (46) ಸಂತೋಷ್ ಆಲಪ್ಪುರ ಹಾಗೂ ಕೊಟ್ಟಾಯಂ ನಿವಾಸಿ ಬಾಬು (46) ಎಂದು ಗುರುತಿಸಲಾಗಿದೆ. ಗಾಯಾಳು ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಮೂಲದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದ. ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ 'ಬೃಹತ್ ಸಾಂಸ್ಕೃತಿಕ ಮೆರವಣಿಗೆ'

error: Content is protected !!
Scroll to Top