ಗೋಹತ್ಯೆ, ಗೋಕಳವು ಮಾಡಿದವರ ಆಸ್ತಿ ಮುಟ್ಟುಗೋಲಿಗೆ ಶಾಸಕ ಭರತ್ ಶೆಟ್ಟಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಅಕ್ರಮ ಗೋ ಹತ್ಯೆ ಮಾಡಿದರೆ ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಬಳಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನೀಡಿರುವ ಅವರು, ಪೊಲೀಸರು ಅಕ್ರಮ ಗೋಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಗೋಹತ್ಯೆ ಆರೋಪ ರುಜುವಾತಾದರೆ ಅಂತಹವರ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

Also Read  ಪತ್ತೂರು: ಹಿಂಬದಿ ಸವಾರರಿಗೂ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ

error: Content is protected !!